ರಾಯಚೂರು, ಮೇ 17- ಆಕಸ್ಮಿಕವಾಗಿ ಬೆಂಕಿ ಬಿದ್ದು 9 ಎಕರೆಯಷ್ಟು ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿಂಧನೂರು ತಾಲೂಕಿನ ಉಪ್ಪಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲಕ್ಷಾಂತರ ರೂ. ಬೆಲೆಯ ಕಬ್ಬು ಸುಟ್ಟುಹೋಗಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದುದನ್ನು ಕಂಡು ಸಾರ್ವಜನಿಕರು ಅಗ್ನಿಶಾಮಕ ದಳದವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿತ್ತು. ಉಪ್ಪಳ ಗ್ರಾಮದ ಬಸಮ್ಮ ಕೋರಿ ಎಂಬುವವರಿಗೆ ಸೇರಿದ ಕಬ್ಬು ನಾಶವಾಗಿದ್ದು, ಆಕೆ ಜಿಲ್ಲಾಡಳಿತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ.