
ಮೈಸೂರು, ಮೇ 17- ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿರುವುದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಕೃಷ್ಣರಾಜ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಜೆಡಿಎಸ್ ಅಭ್ಯರ್ಥಿ ಹಾಗೂ ಕಾಪೆರ್Çರೇಟರ್ ಕೆ.ವಿ.ಮಲ್ಲೇಶ್ ನೇತೃತ್ವದಲ್ಲಿ ಹಲವಾರು ಮಂದಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿ ಘೋಷಣೆ ಕೂಗಿದರು.
ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಕೃಷ್ಣರಾಜ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸಿಗರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಹುಮತ ಸಾಬೀತುಪಡಿಸುವ ಮುನ್ನ ಯಡಿಯೂರಪ್ಪನವರಿಗೆ ಸಿಎಂ ಆಗಲೂ ರಾಜ್ಯಪಾಲರು ಅವಕಾಶ ನೀಡಬಾರದಿತ್ತು ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.