
ಬೆಂಗಳೂರು,ಮೇ17- ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸರ್ಕಾರ ರಚನೆ ಮಾಡುವಷ್ಟು ಬಹುಮತ ಇದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿದ್ದರೂ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿರುವುದು ದುರದೃಷ್ಟಕರ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಾಯಕರು ಬಹುಮತ ಇದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಪ್ರಮಾಣ ವಚನ ಸ್ವೀಕಾರಕ್ಕೆ ಆಹ್ವಾನಿಸಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಸರ್ಕಾರ ಇರುತ್ತದೋ ಇಲ್ಲವೋ ಎಂಬುದನ್ನು ಎರಡು ದಿನ ಕಾದು ನೋಡಬೇಕಿದೆ ಎಂದರು.