
ಲಕ್ನೋ, ಮೇ 17-ಕರ್ನಾಟಕದಲ್ಲಿ ಬಿಜೆಪಿ ಅನುಸರಿಸಿರುವ ಕ್ರಮ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಯಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
ಲಕ್ನೋದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿನ ತನ್ನ ಪ್ರಭಾವ ಬಳಸಿಕೊಂಡು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಆರೋಪಿಸಿದರು. ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್.ಮಹೇಶ್ ಗೆಲುವು ಸಾಧಿಸುವ ಮೂಲಕ ಕರ್ನಾಟಕದಲ್ಲಿ ಬಿಎಸ್‍ಪಿ ತನ್ನ ಖಾತೆ ತೆರೆದಿರುವುದಕ್ಕೆ ಮಾಯಾವತಿ ಸಂತಸ ವ್ಯಕ್ತಪಡಿಸಿದರು.