
ಗದಗ, ಮೇ 17- ನೀರಿನ ಹೊಂಡದಲ್ಲಿ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವೀರನಾರಾಯಣ ದೇವಾಲಯ ಬಳಿಯ ಕೊನ್ನೇರಿ ಕಲ್ಯಾಣಿಯಲ್ಲಿ ಬಿದ್ದು ಜ್ಯೋತಿ ಕೋಟಿ (29) ಎಂಬಾಕೆ ಮೃತಪಟ್ಟಿದ್ದಾಳೆ. ಈ ಯುವತಿಗೆ ವಿವಾಹ ನಿಶ್ಚಯವಾಗಿತ್ತು. ಮದುವೆಗೆ ಇನ್ನು ಎರಡು ತಿಂಗಳು ಬಾಕಿ ಇದ್ದು, ಇದ್ದಕ್ಕಿದ್ದಂತೆ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಲ್ಲಿನ ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.