ನಾಳೆಯೇ ಬಹುಮತಸಾಬೀತು ಪಡಿಸಲು ಸುಪ್ರೀಂ ಸೂಚನೆ: ಇದೊಂದು ಐತಿಹಾಸಿಕ ತೀರ್ಪು: ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ

ನವದೆಹಲಿ:ಮೇ-18: ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನೀಡಿರುವ ಆದೇಶವನ್ನು ಕಾಂಗ್ರೆಸ್ ಮುಖಂಡ ಹಾಗೂ ಹಾಗೂ ಕಾಂಗ್ರೆಸ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕವಾದ ತೀರ್ಪು ನೀಡಿದೆ. ನಾಳೆ ಸಂಜೆ 4 ಗಂಟೆಗೆ ಹಂಗಾಮಿ ಸ್ಪೀಕರ್ ಸಮ್ಮುಖದಲ್ಲಿ ಸದನ ಪರೀಕ್ಷೆ ನಡೆಸಬೇಕೆಂದು ನ್ಯಾಯಾಲಯ ಆದೇಶ ನೀಡಿರುವುದು ಅತ್ಯಂತ ಸ್ವಾಗತಕಾರಿ ಎಂದು ಹೇಳಿದರು.

ನಾಳೆ ಸದನ ಪರೀಕ್ಷೆಗೆ ಮುನ್ನ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕು ಮತ್ತು ಬಿ.ಎಸ್.ಯಡಿಯೂರಪ್ಪನವರು ನಾಳೆಯವರೆಗೆ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿರುವುದು ಮತ್ತು ಆಂಗ್ಲೋ-ಇಂಡಿಯನ್ ಸಮುದಾಯದವರನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿರುವುದು ಕೂಡ ಸ್ವಾಗತಾರ್ಹವಾದುದು ಎಂದು ಸಿಂಘ್ವಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ