
ಬೆಂಗಳೂರು:ಮೇ-18: ಸುಪ್ರೀಂಕೋರ್ಟ್ ತೀರ್ಪನ್ನು ನಾವು ಪಾಲಿಸುತ್ತೇವೆ ಎಂದು ನೂತನ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿ ಮಾತನಾಡಿದ ಅವರು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಹುಮತ ಸಾಬೀತಿಗಾಗಿ ನಾಳೆ ವಿಧಾನಸಭೆ ತುರ್ತು ಅಧಿವೇಶ ಕರೆಯಲು ಕ್ಯಾಬಿನೆಟ್ ಸಭೆ ಕರೆದು ತೀರ್ಮಾನ ಮಾಡುತ್ತಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಇದೇ ವೇಳೆ ಮಾತನಾಡಿದ ಅವರು, 100ಕ್ಕೇ ನೂರು ಬಹುಮತ ಸಾಬೀತು ಪಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.