ಶ್ರೀನಗರ:ಮೇ-19: ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಸದ್ಯ ಜಮ್ಮು ಮತ್ತು ಕಾಶ್ಮೀರದ ಲೇಹ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏಷ್ಯಾದ ಅತೀ ಉದ್ದದ ಎರಡು ದಿಕ್ಕಿನ ಜೋಜಿಲಾ ಪಾಸ್ ಸುರಂಗ 14 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
6,800 ಕೋಟಿ ರುಪಾಯಿಯಲ್ಲಿ ನಿರ್ಮಾಣವಾಗುತ್ತಿರುವ ಸುರಂಗ ಮಾರ್ಗ ಇದಾಗಿದೆ.
ಇದಕ್ಕೂ ಮುನ್ನ ಲೇಹ್ ನಗರದಲ್ಲಿ ನಡೆದ ಲಡಾಕ್ ನ ಅಧ್ಯಾತ್ಮಿಕ ನಾಯಕ ಕುಶಾಕ್ ಬಕುಲಾ ಅವರ 100ನೇ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿ ಕುಶಾಕ್ ಬಕುಲಾ ಅವರಿಗೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗೆ 25 ಸಾವಿರ ಕೋಟಿ ರುಪಾಯಿ ಯೋಜನೆ ಸಿಗಲಿದೆ ಎಂದರು. ಕಾಶ್ಮೀರದ ಬಂಡಿಪೋರಾ ಜಿಲ್ಲೆಯ 330 ಮೆಗಾ ವ್ಯಾಟ್ ಸಮಾರ್ಥ್ಯದ ಕಿಶೆಗಂಗಾ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಲಿದ್ದಾರೆ.