ಬೆಂಗಳೂರು:ಮೇ-19: ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಹನೆ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಎಸ್ ಯಡಿಯೂರಪ್ಪ ಮೂರುದಿನಗಳ ಮುಖ್ಯಮಂತ್ರಿಯಾಗಿ ಕೊನೆಗೂ ವಿಶ್ವಾಸಮತ ಮಂಡನೆಯಲ್ಲಿ ವಿಫಲರಾಗುವುದರೊಂದಿಗೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಾ ಯಡಿಯೂರಪ್ಪ ರಾಜೀನಾಮೆಯೊಂದಿಗೆ ಅಂತ್ಯವಾಗಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಇಂದೇ ವಿಶ್ವಾಸಮತ ಮಂದನೆ ಮಾಡಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದ ಬಿಎಸ್ ಯಡಿಯೂರಪ್ಪ, ಸಂಜೆ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಹುಮತಯಾಚನೆಗೆ ಸಿದ್ಧತೆ ನಡೆಸಿದರು. ಅಲ್ಲದೇ ಸಂಖ್ಯಾಬಲದ ಆಧಾರದಲ್ಲಿ ಬಹುಮತ ಹೊಂದಿಲ್ಲದ ಕಾರಣ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು.
ಮೂರುದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದು, ವಿಶ್ವಾಸಮತಯಾಚನೆ ಮಾಡದೇಯೇ ವಿದಾಯ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಸದನದಿಂದ ಹೊರನಡೆದರು.
ಬಳಿಕ ರಾಜಭವನಕ್ಕೆ ತೆರಳಿದ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
Karnataka Assembly Floor Test,B S Yeddyurappa resigns,Chief Minister