ಬೆಂಗಳೂರು,ಮೇ 19
15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿದ್ದು, ಮೊದಲಿಗೆ ಬಿ.ಎಸ್. ಯಡಿಯೂರಪ್ಪ, ಎರಡನೆಯವರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ನ ವಿಜಯನಗರ ಕ್ಷೇತ್ರ ಶಾಸಕ ಆನಂದ್ ಸಿಂಗ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಸದನದ ಕಲಾಪಕ್ಕೆ ಗೈರುಹಾಜರಾಗಿದ್ದಾರೆ.
ಶಾಂಗ್ರಿಲಾ ಹೋಟೆಲ್ ನಿಂದ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದರು. ಭದ್ರತಾ ಸಿಬ್ಬಂದಿ ಎಲ್ಲರ ಪರಿಶೀಲನೆ ನಡೆಸಿ ಸದನದೊಳಕ್ಕೆ ಬಿಟ್ಟಿದ್ದಾರೆ.
ಮೊದಲ ಹಂತದಲ್ಲಿ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಪ್ರಮಾಣವಚನ ಬೋಧಿಸುತ್ತಿದ್ದಾರೆ.