ಹೊಸದಿಲ್ಲಿ,ಮೇ19
ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶನಿವಾರ ವಜಾ ಮಾಡಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ.
ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು, ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.