ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ: ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು:ಮೇ-೨೦: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸರಕಾರ ರಚನೆ ಹಾಗೂ ಮಂತ್ರಿಮಂಡಲ ರಚನೆ ಕುರಿತು ಚರ್ಚೆ ನಡೆಸಲಿದ್ದೇನೆ ಎಂದರು.

ಇದೇ ವೇಳೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಆಹ್ವಾನಿಸುವುದಾಗಿ ಹೇಳಿದರು.

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಹೊರಬಂದ ಕುಮಾರಸ್ವಾಮಿ, ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿಗೆ ತೆರಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ