
ಮೈಸೂರು, ಮೇ 20- ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ರಘು (24), ನಗರದ ಅಗ್ರಹಾರ ನಿವಾಸಿ ವಿಕ್ರಂ (29) ಹಾಗೂ ಶ್ರೀನಿವಾಸ್‍ಬಾಬು (36) ಬಂಧಿತ ಆರೋಪಿಗಳು.
ಬಂಧಿತರಿಂದ 5380ರೂ., ನಾಲ್ಕು ಮೊಬೈಲ್ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಆರ್‍ಟಿ ನಗರದ ಕೇರ್ಗಳ್ಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೆÇಲೀಸರು ನಿನ್ನೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.