
ಗ್ವಾಲಿಯರ್ :ಮೇ-21: ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ಹೋಗುತ್ತಿದ್ದ ಆಂಧ್ರ ಪ್ರದೇಶ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ.
ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ರೈಲು ಆಗಮಿಸುತ್ತಿದ್ದಂತೆಯೇ ಏಕಾಏಕಿ ರೈಲಿನ ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಎರಡು ಹವಾನಿಯಂತ್ರಿತ ಕೋಚ್ಗಳ ನಡುವಿನಿಂದ ದಟ್ಟ ಕಪ್ಪು ಹೊಗೆ ಹೊಮ್ಮುತ್ತಿದೆ. ಅದೃಷ್ಟವಶಾತ್ ಅಗ್ನಿ ಅವಗಢದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವಿ ಇಲಾಖೆಯ ವಕ್ತಾರ ವೇದ ಪ್ರಕಾಶ್ ತಿಳಿಸಿದ್ದಾರೆ.
ಗ್ವಾಲಿಯರ್ ಸಮಿಪದ ಬಿರ್ಲಾ ನಗರ್ ಸ್ಟೇಷನ್ ಹತ್ತಿರ ಬೆಳಿಗ್ಗೆ 11.50ರ ಸುಮಾರಿಗೆ ಬಿ6 ಮತ್ತು ಬಿ7 ಬೋಗಿಗಳ ನಡುವೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಹೊತ್ತಿಕೊಂಡಿದ್ದ ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಪ್ರಯಾಣಿಕರನ್ನು ಮತ್ತೊಂದು ಬೋಗಿಗೆ ಸ್ಥಳಾಂತರಿಸಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.