
ನವದೆಹಲಿ:ಮೇ-21: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.
ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾದ ಹೆಚ್ ಡಿ ಕುಮಾರಸ್ವಾಮಿ ಬುಧವಾರ ನಡೆಯಲಿರುವ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ರಚನೆಯ ರೂಪುರೇಷೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕು ಮುನ್ನ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರನ್ನುಭೇಟಿ ಮಾಡಿದ್ದ ನಿಯೋಜಿತ ಸಿಎಂ ಕುಮಾರಸ್ವಾಮಿ , ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.
ಕುಮಾರಸ್ವಾಮಿ ಅವರು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ವಿಧಾನಸೌಧ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಮಾಯಾವತಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ನಾಯಕರು ಆಗಮಿಸುವ ನಿರೀಕ್ಷೆಯಿದೆ.