
ಹಾಸನ,ಮೇ 21
ದೇವರ ಅನುಗ್ರಹ, ಹೆತ್ತವರ ಆಶೀರ್ವಾದ ದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಮಾತಿನಾಡಿದ ಅವರು, ನಾನು ಹುಟ್ಟಿ ಬೆಳೆದ ಲಕ್ಷ್ಮಿ ನರಸಿಂಹ ಸ್ವಾಮಿ, ಹರದನಹಳ್ಳಿ ಶಿವನ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು.
ಅಂತೆಯೇ ಇಂದು ಮಧ್ಯಾಹ್ನ ದೆಹಲಿಗೆ ಹೋಗಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಾಯಾವತಿ ಭೇಟಿ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ತಿಳಿಸಿದರು.
ಸಂಪೂರ್ಣ 5 ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಿದೆ. ಈ ಬಾರಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲು ಎಂಬುದು ನನಗೆ ಗೊತ್ತಿದೆ. ಎಲ್ಲರ ಅಭಿಪ್ರಾಯಗಳನ್ನು ನಾನು ಗಮನಿಸುತ್ತಿದ್ಸೇನೆ
ಯಾರೂ ನನ್ನನ್ನು ನಿದ್ದೆಗೆಡಿಸಲು ಆಗಲ್ಲ ಎಂದು ಶಾಸಕ ಶ್ರೀರಾಮುಲುಗೆ ತಿರುಗೇಟು ನೀಡಿದರು.