
ನವದೆಹಲಿ, ಮೇ 21-ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.
ಕೇಜ್ರಿವಾಲ್ ಪಾಲ್ಗೊಳ್ಳುವಿಕೆಯನ್ನು ದೆಹಲಿ ಸರ್ಕಾರದ ಅಧಿಕೃತ ಪ್ರಕಟಣೆ ಖಚಿತಪಡಿಸಿದೆ. ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀಡಿರುವ ಆಹ್ವಾನವನ್ನು ಕೇಜ್ರಿವಾಲ್ ಪರಿಗಣಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.