ನಾಳೆ ನನ್ನ ಜೊತೆ ಇನ್ನೂ ಕೆಲವರು ಪ್ರಮಾಣವಚನ ಸ್ವೀಕಾರ: ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು,ಮೇ 22

ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಇನ್ನೂ ಕೆಲವು ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಹೀಗೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆ ಕುರಿತು ಇಂದು ಸಂಜೆ ತೀರ್ಮಾನ ಮಾಡಲಾಗುವುದು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಈಗಾಗಲೇ ಕೆಲವು ಖಾತೆಗಳು ಎರಡೂ ಪಕ್ಷಗಳ ಕೆಲವು ಹಿರಿಯ ಶಾಸಕರಿಗೆ ನೀಡುವುದು ಖಚಿತವಾಗಿದ್ದು ಅವರು ನಾಳೆ ಹೆಚ್ ಡಿ ಕುಮಾರಸ್ವಾಮಿಯವರ ಜೊತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ