ಕೇರಳದಲ್ಲಿ ನಿಫಾ ವೈರಸ್ ಮೈಸೂರಿನಾದ್ಯಂತ ಹೈ ಅಲರ್ಟ್

ಮೈಸೂರು, ಮೇ 22-ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಹಲವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಈ ಬಗ್ಗೆ ಮೈಸೂರು ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ನಗರ ಹಾಗೂ ಜಿಲ್ಲೆಯಾದ್ಯಂತ ಇರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಹಾಸಿಗೆಯನ್ನು ಕಾಯ್ದಿರಿಸಲಾಗಿದೆ.
ನಗರದಲ್ಲಿಯೂ ಸಹ ರೋಗ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಈ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನೇತೃತ್ವದಲ್ಲಿ ಇಂದು ಸಂಜೆ ಸಭೆ ನಡೆಯಲಿದೆ.
ಮೈಸೂರು ಪ್ರವಾಸ ತಾಣವಾಗಿದ್ದು, ಕೇರಳದಿಂದಲೂ ಬಹಳಷ್ಟು ಮಂದಿ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ