
ದಕ್ಷಿಣ ಕನ್ನಡ, ಮೇ 22-ಕೇರಳದಲ್ಲಿ ನಿಫಾ ವೈರಸ್ ಸೋಂಕು ತೀವ್ರಗೊಂಡ ಹಿನ್ನಲೆಯ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ ಕೈಗೊಂಡಿರುವುದಾಗಿ ಡಿಎಚ್ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ವೈದ್ಯಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಇಲ್ಲಿಯವರೆಗೂ ಜಿಲ್ಲೆಯಲ್ಲಿ ನಿಫಾ ವೈರಸ್ ಬಗ್ಗೆ ವರದಿಯಾಗಿಲ್ಲ, ಆದರೂ ಸಹ ನಾವು ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದರು. ಜನರಲ್ಲಿ ವೈರಸ್ ಬಗ್ಗೆ ಆತಂಕ ಮೂಡಿದ್ದು, ಆರೋಗ್ಯ ಇಲಾಖೆಯಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಎಚ್ಚರಿಕೆ ವಹಿಸಲು ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಹೇಳೀದರು.