ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ವಿರೋಧ: ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಣೆ

ಬೆಂಗಳೂರು:ಮೆ-23: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸುತ್ತಿದೆ.

ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಪಕ್ಷದ ಯಾವುದೇ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಬಿಜೆಪಿ ಹೇಳಿದೆ.

ಈ ಬಗ್ಗೆ ಬಿಜೆಪಿ ವಕ್ತಾರ ಶಾಂತರಾಮ್ ಅವರು ಹೇಳಿಕೆ ನೀಡಿದ್ದು, ಅಪವಿತ್ರ ಮೈತ್ರಿ ಸರ್ಕಾರದ ವಿರುದ್ಧ ಎಲ್ಲಾ ಜಿಲ್ಲಾ ಕೇಂದ್ರಗಳು ಸೇರಿದಂತೆ ರಾಜ್ಯಾದಾದ್ಯಂತ ಪಕ್ಷದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ಮೌರ್ಯ ಹೋಟೆಲ್ ಎದುರಿನ ಗಾಂಧೀಜಿ ಪ್ರತಿಮೆ ಎದುರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಶೋಭಾ‌ ಕರಂದ್ಲಾಜೆ, ರವಿಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಜನಾದೇಶದ ವಿರುದ್ಧ ಸರ್ಕಾರ ರಚಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಲಬುರ್ಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.ಶಾಸಕ ಬಿ.ಜಿ.ಪಾಟೀಲ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ