ನಿಫಾ ವೈರಸ್ ಸೋಂಕು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿಯೋಜಿತ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚನೆ

ಬೆಂಗಳೂರು:ಮೇ-23: ಮಾರಣಾಂತಿಕ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೇರಳದಲ್ಲಿ ಈಗಾಗಲೇ 12 ಜನ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದ ಮಂಗಳೂರಿನಲ್ಲಿಯೂ ಇಬ್ಬರಲ್ಲಿ ಈ ವೈರಸ್ ಕಂದು ಬದಿದೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ನಿಫಾ ವೈರಸ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.

ಕೇರಳಕ್ಕೆ ಹೊಂದಿಕೊಂಡಿರುವ ರಾಜ್ಯದ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಸ್‌ ವ್ಯಾಪಿಸುವ ಸಾಧ್ಯತೆಗಳಿವೆ. ಆದ್ದರಿಂದ ಸೋಂಕು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುಕುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿಯೋಜಿತ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ