ಬೆಂಗಳೂರು:ಮೇ-23: ರೈತರ ಸಾಲ ಮನ್ನಾ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವಿಚಿತ್ರ ಹೇಳಿಕೆ ನೀಡಿದ್ದು, ಕೇವಲ 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ..? ಸಮನ್ವಯ ಸಮಿತಿಲಿ ಚರ್ಚಿಸಿ ಮಾಡಬೇಕಷ್ಟೆ
ಎಂದು ಹೇಲಿದ್ದಾರೆ.
ಪದ್ಮಾನಾಭನಗರ ನಿವಾಸದಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ? 37 ಜನರನ್ನ ಇಟ್ಟುಕೊಂಡು ಸಾಲ ಮನ್ನಾ ಮಾಡಲು ಆಗುತ್ತಾ? ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಮಾಡಬೇಕಷ್ಟೆ ಎಂದು ದೇವೇಗೌಡರು ಹೇಳಿದ್ದಾರೆ. ನಾನು ಜೆಡಿಎಸ್ ಪಕ್ಷದ ಅಧ್ಯಕ್ಷ ಎಂಬುವುದಕ್ಕಿಂತ ಹೆಚ್ಚಾಗಿ ತಂದೆ -ತಾಯಿಗಳಾಗಿ ಅರ್ಶಿವಾದ ಮಾಡುತ್ತಿದ್ದೇನೆ. ಇದು ತಂದೆ-ತಾಯಿಗಳಾದ ನಮ್ಮ ಕರ್ತವ್ಯ, ಸಮ್ಮಿಶ್ರ ಸರ್ಕಾರದಲ್ಲಿ ಬಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳಬೇಕು್ ಎಂದರು.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಇದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ನಿಯೋಜಿತ ಸಿಎಂ ಕುಮಾರಸ್ವಾಮಿಗೆ ದೇವೇಗೌಡ್ರು ಇದೇ ವೇಳೆ ಸಲಹೆ ನೀಡಿದರು.
ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಬಂದಿದ್ದಾರೆ. ತೃತೀಯ ರಂಗದ ಬಗ್ಗೆ ಈಗಲೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು.