ಮೈಸೂರು, ಮೇ 23- ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ನಗರದ ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಕಲ್ಯಾಣಗಿರಿ ವಾಸಿ ಸಯ್ಯದ್ ಸುಹೇಲ್ (20) ಬಂಧಿತ ಆರೋಪಿಯಾಗಿದ್ದು , ಈತನಿಂದ 90 ಸಾವಿರ ರೂ. ಬೆಲೆಯ 2 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಬೈಕ್‍ನ್ನು ಅನುಮಾನಾಸ್ಪದವಾಗಿ ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿದ್ದ ಪೆÇಲೀಸರು ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಆರೋಪಿ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡಿದ್ದಾಗಿ ಪೆÇಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ನಗರ ಡಿಸಿಪಿ ಮಹಾಲಿಂಗ ಅವರ ಮಾರ್ಗದರ್ಶನದಲ್ಲಿ ಎಸಿಪಿ ಲಿಂಗಪ್ಪ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಸಂತೋಷ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.