ಕೋಲಾರ, ಮೇ 23-ಪೆಟ್ಟಿಗೆ ಅಂಗಡಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ರಾಜ್‍ಪೇಟೆ ರಸ್ತೆಯಲ್ಲಿ ನಡೆದಿದೆ.
ಕೃಷ್ಣಾರೆಡ್ಡಿ (65) ಮೃತ ವ್ಯಕ್ತಿ. ಈತ ಪೆಟ್ಟಿಗೆ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಮಳೆ ಸುರಿದ ಹಿನ್ನೆಲೆಯಲ್ಲಿ ಪೆಟ್ಟಿಗೆ ಅಂಗಡಿಗೆ ಗ್ರೌಂಡ್ ಆಗಿ ಇಂದು ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಹೋದಾಗ ಶಾಕ್ ಹೊಡೆದು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಂಡರ್‍ಸನ್‍ಪೇಟೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.