
ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ.
ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು ಜಿಲ್ಲೆಗಳ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ, ಬಿಎ, ಬಿಕಾಂ, ಬಿಬಿಎಂ, ಬಿಸಿಎ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಪದವಿ ತರಗತಿಗಳ ಎರಡು, ನಾಲ್ಕು ಹಾಗೂ ಆರನೇ ಸೆಮಿಷ್ಟರ್ಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಆದೇಶ ಹೊರಡಿಸಲಾಗಿದೆ.