![CM HDK meet shivakumaraswamiji](http://kannada.vartamitra.com/wp-content/uploads/2018/05/CM-HDK-meet-shivakumaraswamiji-574x381.jpg)
ತುಮಕೂರು:ಮೇ-24: ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶತಾಯುಷಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆಶಿರ್ವಾದ ಪಡೆದರು.
ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಮಠಗಳಿಗೆ ಭೇಟಿ ನೀಡುತ್ತಿರುವ ಸಿಎಂ, ರಾಜ್ಯ ಸರಕಾರದ ಉತ್ತಮ ಕಾರ್ಯ ನಿರ್ವಹಣೆಗೆ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಇದೇ ವೇಳೆ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ,ಮಠದಲ್ಲಿಯೇ ಮುದ್ದೆ ಊಟ ಸವಿದರು.