ನವದೆಹಲಿ:ಮೇ-24: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಎಂಬ ಅಭಿಯಾನದ ಅಡಿ ಫಿಟ್ನೆಸ್ಗೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ.
ತಾವು ಫಿಟ್ನೆಸ್ ಕಾಯ್ದುಕೊಳ್ಳಲು ಅನುಸರಿಸುವ ಗುಟ್ಟನ್ನು ವಿಡಿಯೊ ಮೂಲಕ ಆದಷ್ಟು ಬೇಗ ತಿಳಿಸುವುದಾಗಿ ಮೋದಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಫಿಟ್ನೆಸ್ಗೆ ಸಂಬಂಧಿಸಿದಂತೆ ತಮ್ಮ ಪತ್ನಿ ಅನುಷ್ಕಾ ಶರ್ಮಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕ್ರಿಕೆಟಿಗ ಮಹೇಂದ್ರ ಸಿಂಗ್ ದೋನಿ ಅವರಿಗೆ ಬುಧವಾರ ಟ್ವಿಟರ್ನಲ್ಲಿ ಸವಾಲು ಹಾಕಿದ್ದರು.
ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಎಂಬ ಅಭಿಯಾನದ ಅಡಿಯಲ್ಲಿ ಎಲ್ಲ ಭಾರತೀಯರು ತಮ್ಮ ಫಿಟ್ನೆಸ್ ಮಂತ್ರದ ಬಗ್ಗೆ ವಿಡಿಯೊ ಮಾಡಿ ಹಂಚಿಕೊಳ್ಳಲು ಟ್ವಿಟರ್ನಲ್ಲಿ ಇತ್ತೀಚೆಗೆ ಕರೆ ನೀಡಿದ್ದರು.
ತಮ್ಮ ಜಿಮ್ ನ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು. ಕೊಹ್ಲಿ ಅವರ ಈ ಟ್ವೀಟ್ ಗೆ ಮೋದಿ ಪ್ರತಿಕ್ರಿಯಿಸಿದ್ದು, ಸವಾಲನ್ನು ಸ್ವೀಕರಿಸಿದ್ದೇನೆ. ನನ್ನ ಫಿಟ್ ನೆಸ್ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಆ ಮೂಲಕ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ #HumFitTohIndiaFit ಹ್ಯಾಶ್ ಟ್ಯಾಗ್ ವೈರಲ್ ಆಗುತ್ತಿದೆ.