ಬೆಂಗಳೂರು,ಮೇ 24
ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗೆ ಆಗ್ರಹಿಸಿ ಇದೇ ತಿಂಗಳ 30, 31 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ಕೊಟ್ಟಿದೆ.
ಇಂದು ಸುದ್ದಿಗೋಷ್ಠಿ ನಡೆಸಿದ ನೌಕರರು, ಈಗಾಗಲೇ ಸಾಕಷ್ಟು ಬಾರಿ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಜೊತೆಗೆ ಮಾತುಕತೆ ನಡೆದಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದರು.
9ಯೂನಿಯನ್‌ಗಳು ಸೇರಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಇದೇ ತಿಂಗಳ 30, 31 ರಂದು ಬೆಳಗ್ಗೆ 10-30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಅಖಿತ ಭಾರತ ಮುಷ್ಕರಕ್ಕೆ ಕರೆ ನೀಡಿರೋದ್ರಿಂದ ಆಯಾ ಜಿಲ್ಲೆ, ರಾಜ್ಯದಲ್ಲಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಸುಮಾರು 10ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.