ಚಾಕುವಿನಿಂದ ಇರಿತ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ:

ಕೋಲಾರ, ಮೇ 24- ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಾದ್ರಿಪುರ ಗ್ರಾಮದ ವಾಸಿ ಭರತ್ ಮೃತಪಟ್ಟ ಯುವಕ.
ಕಳೆದ ಮೇ 21ರಂದು ಭರತ್ ಹಾಗೂ ರಾಜಶೇಖರ್, ಶಿವು, ಶಿವರಾಜ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿ ರಾಜಶೇಖರ್, ಶಿವು, ಶಿವರಾಜ್ ಮೂವರೂ ಭರತ್‍ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತಕ್ಷಣವೇ ಭರತ್‍ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಭರತ್ ಮೃತಪಟ್ಟಿದ್ದಾನೆ. ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ.ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ