ಬೆಂಗಳೂರು,ಮೇ 25
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಂದೆ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸ ಅಮೋಘಕ್ಕೆ ಆಗಮಿಸಿದ ಹೆಚ್‌ಡಿಕೆ, ಬಹುಮತ ಸಾಬೀತುಪಡಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ದೇವೇಗೌಡರು ಹಲವು ಮಹತ್ವದ ಸಲಹೆಗಳನ್ನು ಕುಮಾರಸ್ವಾಮಿ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬಹುಮತ ಸಾಬೀತಿಗೆ ಯಾವುದೇ ಭಯ ಇಲ್ಲ ಎಂದು ಹೇಳಿದರು. ನಂತರ ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿದ ಅವರು ಶಾಸಕರ ಕತೆ ಸಭೆ ನಡೆಸಿದರು.