ಸರ್ಕಾರ ದೇಶದ ಗ್ರಾಮಗಳ ಅಭಿವೃದ್ಧಿಗೆ ಸಂಪೂರ್ಣ ಬದ್ಧವಾಗಿದೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ನವದೆಹಲಿ, ಮೇ 26-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಗ್ರಾಮಗಳ ಅಭಿವೃದ್ಧಿಗೆ ಸಂಪೂರ್ಣ ಬದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ನಾಲ್ಕನೇ ವರ್ಷಾಚರಣೆ ಸಂದರ್ಭದಲ್ಲಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರದ ಸಾಧನೆಗಳನ್ನು ಪಟ್ಟಿ ಮಾಡಿದರು.
ಮೋದಿ ಅವರು ದೇಶದಲ್ಲಿ ವಂಶಪಾರಂಪರ್ಯ ರಾಜಕಾರಣ, ಸ್ವಾರ್ಥ ರಾಜಕೀಯ ಮತ್ತು ಜಾತೀಯತೆಯನ್ನು ನಿರ್ಮೂಲನೆ ಮಾಡಿ, ರಾಷ್ಟ್ರದ ಜನರಿಗಾಗಿ ಸಮಗ್ರ ಮತ್ತು ಸರ್ವಾಂಗೀಣ ಅಭಿವೃದ್ದಿ ಕಾರ್ಯಕ್ರಮಗಳ ಮೂಲಕ ತಮ್ಮ ರಾಜಕೀಯ ಇಚ್ಚಾಶಕ್ತಿ ಪ್ರದರ್ಶಿಸಿದ್ದಾರೆ ಎಂದರು.
ಸರ್ಜಿಕಲ್ ದಾಳಿ ನಡೆಸುವ ಮೂಲಕ ದೇಶದ ರಕ್ಷಣೆಗೆ ಸರ್ಕಾರ ಬದ್ದವಾಗಿರುವುದನ್ನು ಮೋದಿ ಸಾಬೀತು ಮಾಡಿದ್ಧಾರೆ. ಕಾಳಧನ, ನಕಲಿ ನೋಟು ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಅತ್ಯಂತ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಶಾ ವಿವರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ