ಬೆಂಗಳೂರು,ಮೇ 26- ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಖಾಸಗಿ ಹೋಟೆಲ್ನಲ್ಲಿಂದು ಮಹತ್ವದ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಉಭಯ ಪಕ್ಷಗಳ ನಾಯಕರು ಮಾತುಕತೆ ನಡೆಸಿದರು.
ಉಭಯ ಪಕ್ಷಗಳ ನಡುವೆ ಹಂಚಿಕೆಯಾಗಿರುವಂತೆ ಯಾವ ಯಾವ ಖಾತೆಗಳನ್ನು ಯಾರ್ಯಾರಿಗೆ ನೀಡಬೇಕು, ಉಭಯ ಪಕ್ಷಗಳಲ್ಲಿ ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಎರಡೂ ಪಕ್ಷದ ನಾಯಕರು ಸಮಾಲೋಚನೆ ನಡೆಸಿದ್ದಾರೆ.
ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜಾತಿವಾರು, ಜಿಲ್ಲಾವಾರು ಪ್ರಾತಿನಿಧ್ಯ ನೀಡುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಸಂಪುಟ ಸೇರ್ಪಡೆಯಾಗುವ ಶಾಸಕರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷದ ನಾಯಕರು ಅಂತಿಮಗೊಳಿಸಿ ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.