ಗೋವಾ ಬೀಚ್‌: ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ !

ಪಣಜಿ,ಮೇ 26

ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ.

ವಿಹರಿಸುತ್ತಿದ್ದ ಜೋಡಿಯನ್ನು ಕಾಮುಕರು ಹಿಡಿದು ವಿವಸ್ತ್ರಗೊಳಿಸಿ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳಿಕ ಸರದಿಯಂತೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.

ದಕ್ಷಿಣ ಗೋವಾ ಪೊಲೀಸ್‌ ಸುಪರಿಟೆಂಡೆಂಟ್‌ ಅರವಿಂದ್‌ ಗಾವಾಸ್‌ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ಯುವತಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಹವವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ