ಮೈಸೂರು,ಮೇ 27- ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಎನ್.ಆರ್.ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕೃತಿ(23) ಸಾವನ್ನಪ್ಪಿದ ಯುವತಿ. ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ಮೇ 25ರಂದು ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಸ್ನೇಹ ಎಂಬ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಪ್ರಕೃತಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೆ ಪ್ರಕೃತಿ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಎನ್.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.