ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ

ಬೆಂಗಳೂರು, ಮೇ 27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶುಭಾಷಯ ಕೋರಲು ಬಂದಿದ್ದೆ. ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆಸಿಲ್ಲ ಎಂದರು.
ಸಿನಿಮಾ ವಲಯದಲ್ಲಿ ಕುಮಾರಸ್ವಾಮಿಯವರ ಒಡನಾಟ ಮೊದಲಿನಿಂದಲೂ ಇತ್ತು. ಹೀಗಾಗಿ ನಮ್ಮ ಅವರ ಪರಿಚಯ ಬಹಳ ಹಿಂದಿನದು. ಒಂದೇ ಕುಟುಂಬದವರಂತೆ ನಾವೆಲ್ಲ ಇದ್ದೇವೆ. ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರಿಂದ ಅವರನ್ನು ಭೇಟಿ ಮಾಡಿ ಅಭಿನಂದಿಸಿರಲಾಗಿರಲಿಲ್ಲ. ಹಾಗಾಗಿ ಇಂದು ಅವರನ್ನು ಭೇಟಿ ಮಾಡಿದೆವು ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಕಾಳಜಿ ಹೊಂದಿರುವ ಕುಮಾರಸ್ವಾಮಿ ಅವರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ