ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ – ಸಿದ್ದರಾಮಯ್ಯ

ನವದೆಹಲಿ, ಮೇ 27-ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಲಾ 30 ತಿಂಗಳು ಅಧಿಕಾರ ಹಂಚಿಕೆಯೋ ಅಥವಾ 5 ವರ್ಷ ಸಂಪೂರ್ಣ ಜೆಡಿಎಸ್‍ಗೆ ಅಧಿಕಾರ ನೀಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,ಈ ಬಗ್ಗೆ ಯಾವುದೇ ರೀತಿ ಚರ್ಚೆಯಾಗಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದರು.
ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲಾಗಿದೆ. ಇನ್ನೂ ಅಂತಿಮವಾಗಿಲ್ಲ. ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೈತ್ರಿ ಸರ್ಕಾರದ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ರೀತಿ ಚರ್ಚೆಯಾಗಿಲ್ಲ ಎಂದು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಕೂಡ ಹೇಳಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಈ ವಿಷಯವನ್ನು ಅವರು ಪ್ರಸ್ತಾಪಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ