ಮೈಸೂರು, ಮೇ 27-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕರೆ ನೀಡಿರುವ ನಾಳಿನ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ತಿಳಿಸಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಈಗಷ್ಟೇ ಅಧಿಕಾರಕ್ಕೆ ಬಂದಿದ್ದಾರೆ. ಸಮಯಾವಕಾಶ ಬೇಕಾಗುತ್ತದೆ. ಜತೆಗೆ ಸಾಲ ಮಾಡಲು ಅಭ್ಯಂತರವೇನಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ನೋಡಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಹಾಗಾಗಿ ನಾಳೆ ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಸಾಲ ಮನ್ನಾ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇವೆ. ಆನಂತರ ಅವರ ಉತ್ತರ ಹಾಗೂ ನಡೆಯನ್ನು ನೋಡಿ ಬಂದ್ಗೆ ನಿರ್ಧರಿಸುತ್ತೇವೆ. ನಾಳಿನ ಬಂದ್ಗೆ ನಮ್ಮ ಬೆಂಬಲ ಇಲ್ಲ, ನಾವು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.