ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ

ತುಮಕೂರು, ಮೇ 27- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಳಿಯಾರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಳಿಯಾರು ನಿವಾಸಿ ಲಕ್ಷ್ಮಯ್ಯ(58) ಮೃತಪಟ್ಟ ದುರ್ದೈವಿ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನ ಬೆಸ್ಕಾಂ ಮುಂಭಾಗ ಲಕ್ಷ್ಮಯ್ಯ ನಡೆದು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಕ್ಷ್ಮಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಹುಳಿಯಾರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ