ಚಾಮರಾಜನಗರದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ: ಬಿಜೆಪಿ ಕಾರ್ಯಕರ್ತರ ವಶ

ಚಾಮರಾಜನಗರ: ರೈತರ ಸಾಲ ಮನ್ನಾ ಘೋಷಣೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಇಂದಿ ಕರ್ನಾಟಕ್ ಬಂದ್ ಗೆ ಕರೆ ನೀಡಿದೆ. ಕೆಲವೆಡೆ ಬಂದ್ ನಡೆಯುತ್ತಿದ್ದರೆ, ರಾಜ್ಯದ ಹಲವು ಭಾಗಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಚಾಮರಾಜ ನಗರದಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ಸಹಜವಾಗಿದೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವೂ ಎಂದಿನಂತಿದೆ. ಜನರಿಗೆ ಬಂದ್ ಬಿಸಿ ತಟ್ಟಿಲ್ಲ.

ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲಗೊಂಡಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಆಟೊಗಳು ಎಂದಿನಂತೆ ಸಂಚಾರ ಆರಂಭಿಸಿವೆ‌. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಸಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ