ನಾನು ಸ್ವತಂತ್ರ ಮುಖ್ಯಮಂತ್ರಿಯಲ್ಲ; ಕಾಂಗ್ರೆಸ್ ಪಕ್ಷದ ಅನುಮತಿಯಿಲ್ಲದೇ ಏನನ್ನೂ ಮಾಡಲು ಸಾಧ್ಯವಿಲ್ಲ: ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುನರುಚ್ಛಾರ

ಬೆಂಗಳೂರು:ಮೇ-28: ಕಾಂಗ್ರೆಸ್ ಪಕ್ಷದ ಅನುಮತಿ ಪಡೆಯದೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ದಿ ವಿಚಾರದಲ್ಲಿ ನನ್ನ ಜವಾಬ್ದಾರಿ ಬೇರೆಯಾಗಿರುತ್ತದೆ. ಆದರೆ. ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಬೇಕಾದರೆ ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿಯೇ ಇರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಪುನರ್ ಉಚ್ಚರಿಸಿದರು.

ಜೆಡಿಎಸ್ ಪಕ್ಷವನ್ನು ಸ್ವಂತ ಬಲದ ಆಧಾರದ ಮೇಲೆ ಅಧಿಕಾರಕ್ಕೆ ತರುವಂತೆ ಜನತೆಯಲ್ಲಿ ಮನವಿ ಮಾಡಿದ್ದೇ. ಆದರೆ, ಈಗ ಕಾಂಗ್ರೆಸ್ ನಾಯಕರ ಮೇಲೆ ಅವಲಿಂಬಿತವಾಗುವಂತೆ ಮಾಡಿದ್ದಾರೆ. ಇದು ನನ್ನ ಸ್ವತಂತ್ರ ಸರ್ಕಾರವಲ್ಲ, ರಾಜ್ಯದ 6 ಕೋಟಿ ಜನಸಂಖ್ಯೆಯ ಕಾರಣದಿಂದ ನಾನು ಇಲ್ಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಮೇ 23 ರಂದು ಅಧಿಕಾರ ಸ್ವೀಕರಿಸಿದ್ದರು. ಇಬ್ಬರು ಪಕ್ಷೇತರ ಸದಸ್ಯರೊಂದಿಗೆ ನೂತನ ಸಂಮಿಶ್ರ ಸರ್ಕಾರ 117 ಸದಸ್ಯರನ್ನು ಹೊಂದಿದ್ದು, ಸರಳ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ