ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ

ಬೆಂಗಳೂರು, ಮೇ 28- ಹಿರಿಯ ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ವಾರಗಳ ಹಿಂದಷ್ಟೇ ಚುನಾಯಿತರಾಗಿದ್ದ ಶಾಸಕ ಸಿದ್ದು ಭೀಮಪ್ಪ ನ್ಯಾಮಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಭಾನುವಾರವಿಡೀ ಲವಲವಿಕೆಯಿಂದ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದ ನ್ಯಾಮಗೌಡ ಅವರು ತಮ್ಮ ತವರಿಗೆ ಮರಳುವಾಗ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಏಕಕಾಲಕ್ಕೆ ದುಃಖ ಮತ್ತು ನೋವನ್ನುಂಟುಮಾಡಿದೆ ಎಂದು ಮುಖ್ಯಮಂತ್ರಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ ನ್ಯಾಮಗೌಡ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಯಿತು. ಅವರೊಬ್ಬ ಸೃಜನಶೀಲ ರಾಜಕಾರಣಿ, ಸ್ನೇಹಜೀವಿಯಾಗಿದ್ದರು ಎಂದು ಗೌಡರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ