ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

 

ಬೆಂಗಳೂರು, ಮೇ 28-ತನ್ನ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಇಂದು ಚಾಟಿ ಬೀಸಿದೆ.
ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶವಿದ್ದರೂ ಸಹ ಅದನ್ನು ಪಾಲಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಉಚ್ಚ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಮೂರ್ತಿಗಳಾದ ವಿ.ಎಸ್.ಪಾಟೀಲ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿ ಕಳೆದ ಎರಡು ತಿಂಗಳಿನಿಂದ ಹೈಕೋರ್ಟ್ ಸಿಬ್ಬಂದಿಗೆ ಸಂಬಳ ಲಭಿಸುತ್ತಿಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಆದೇಶವಿದ್ದರೂ ಅದನ್ನು ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಪರಿಜ್ಞಾನ ನಿಮಗಿದೆಯೇ ಎಂದು
ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶವಿದ್ದರೂ ಸಹ ಅದನ್ನು ಪಾಲಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಉಚ್ಚ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಮೂರ್ತಿಗಳಾದ ವಿ.ಎಸ್.ಪಾಟೀಲ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿ ಕಳೆದ ಎರಡು ತಿಂಗಳಿನಿಂದ ಹೈಕೋರ್ಟ್ ಸಿಬ್ಬಂದಿಗೆ ಸಂಬಳ ಲಭಿಸುತ್ತಿಲ್ಲ, ಅವರು ಬದುಕಬೇಕೇ ಅಥವಾ ಸಾಯಬೇಕೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಆದೇಶವಿದ್ದರೂ ಅದನ್ನು ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಪರಿಜ್ಞಾನ ನಿಮಗಿದೆಯೇ, ಆದೇಶಗಳಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿತು ಅಲ್ಲದೆ, ಸರ್ಕಾರದ ನಿಷ್ಕ್ರಿಯತೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಮುಖ್ಯ ಕಾರ್ಯದರ್ಶಿಯವರು ಈ ವಿಚಾರ ಕುರಿತು ಖುದ್ದು ಹಾಜರಾಗಬೇಕು. ಕಾನೂನು ಇಲಾಖೆ ಹಾಗೂ ಹಣಕಾಸು ಇಲಾಖೆಯ ಕಾರ್ಯದರ್ಶಿಗಳೂ ಕೂಡ ಈ ಸಂಬಂಧ ಹಾಜರಾಗಬೇಕೆಂದು ಕೋರ್ಟ್ ನಿರ್ದೇಶನ ನೀಡಿದೆ.
ಹೈಕೋರ್ಟ್ ನೌಕರರಿಗೂ ಕೇಂದ್ರ ಸರ್ಕಾರ ನೌಕರರಿಗೆ ಸರಿಸಮಾನವಾದ ವೇತನ ಪರಿಷ್ಕರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ