ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟ

ನವದೆಹಲಿ:ಮೇ-29: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ 2018ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಶೇ 86.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶಾಲೆಗಳಲ್ಲಿ ಇಂದು ಸಂಜೆ 4 ಗಂಟೆಗೆ ಫಲಿತಾಂಶಗಳು ಪ್ರಕಟವಾಗಲಿವೆ. ನಾಲ್ವರೂ ವಿದ್ಯಾರ್ಥಿಗಳು 500ಕ್ಕೆ 499 ಅಂಕಗಳನ್ನು ಪಡೆದು, ಟಾಪರ್‌ಗಳಾಗಿ ಹೊರ ಹೊಮ್ಮಿದ್ದಾರೆ. ಮಾರ್ಚ್‌ 5ರಿಂದ ಎಪ್ರಿಲ್‌ 25ರವರೆಗೆ ಸಿಬಿಎಸ್‌‌ಇ 10ನೇ ತರಗತಿ ಪರೀಕ್ಷೆಗಳು ನಡೆದಿದ್ದವು.

ಹತ್ತನೇ ತರಗತಿ ಸಿಬಿಎಸ್‌ಇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಿಬಿಎಸ್‌ಇ ಮಂಡಳಿಯ ಅಧಿಕೃತ ಜಾಲತಾಣ www.cbse.nic.in ದಿಂದ ಫಲಿತಾಂಶವನ್ನು ಪಡೆಯಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ