
ಬಲಿಯಾ, ಮೇ 29-ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟು ಐವರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತೆಯ ಪತಿ ಪೆÇಲೀಸರಿಗೆ ದೂರು ನೀಡಿದ್ಧಾರೆ.
ಮೇ 13ರಂದು ತಮ್ಮ ಪತಿ ಮಾರುಕಟ್ಟೆಗೆ ತೆರಳುತ್ತಿದ್ದಾಗ ಆಕೆಯನ್ನು ಐವರು ಅಪಹರಿಸಿ ನಿರ್ಜನ ಪ್ರದೇಶವೊಂದರಲ್ಲಿ ಅಕ್ರಮ ಬಂಧನದಲ್ಲಿರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಮಹಿಳೆ ಮನೆಗೆ ಹಿಂದಿರುಗಿದ್ದಾಳೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೆÇಲೀಸ್ ವರಿಷ್ಠಾಧಿಕಾರಿ ಶ್ರೀಪರ್ಣ ಗಂಗೂಲಿ ತಿಳಿಸಿದ್ದಾರೆ.
ಐವರು ಕಾಮುಕರ ಪತ್ತೆಗೆ ಬಲೆ ಬೀಸಲಾಗಿದೆ.