8 ಅತ್ಯಾಚಾರ ಪ್ರಕರಣಗಳ ಆರೋಪಿ ಸೈಕೋ ದೊರೆ ಅರೆಸ್ಟ್‌ 

ಬೆಂಗಳೂರು,ಮೇ 29

8 ಕ್ಕೂ ಹೆಚ್ಚು ಅತ್ಯಾಚಾರಗಳ ಆರೋಪಿ ತಮಿಳುನಾಡು ಮೂಲದ ಸೈಕೋ ದೊರೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ದೊರೆಯನ್ನು ವಶಕ್ಕೆ  ಪಡೆದಿರುವ ಬಗ್ಗೆ ವರದಿಯಾಗಿದೆ.

ಪೀಣ್ಯ, ಯಶವಂತಪುರ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಬಂಧಿತ ದೊರೆ ವಿಕೃತಿ ಮೆರೆದಿದ್ದ.

ಇನ್ಸ್‌ಪೆಕ್ಟರ್‌ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ