
ಕೆ.ಆರ್.ಪೇಟೆ, ಮೇ 30-ತಾಲೂಕಿನ ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿ ಯಂತ್ರ ಮತ್ತು ಟಿಪ್ಪರ್ ಲಾರಿ ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ತಹಶೀಲ್ದಾರ್ ಗುರುಸಿದ್ಧಯ್ಯ ಹಿರೇಮಠ್ ಶೀಳನೆರೆ ಹೋಬಳಿಯ ರಾಜಶ್ವನಿರೀಕ್ಷಕ ರಾಮಚಂದ್ರ ಮತ್ತು ಸಿಬ್ಬಂಧಿಗಳು ದಿಢೀರ್ ದಾಳಿ ನಡೆಸಿದಾಗ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಹತ್ತಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಓಡಿಹೋಗಿ ತಲೆ ಮರೆಸಿಕೊಂಡರು ಆದರೆ ಕಾನೂನಿಗೆ ವಿರುದ್ಧವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮಲ್ಕೋನಹಳ್ಳಿಯ ಜಯರಾಮ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.