ಸಾಲ ಮನ್ನಾ ಬಗ್ಗೆ ರೈತರೊಂದಿಗೆ ಸಿಎಂ ಸಭೆ: ಯಶಸ್ವಿನಿ ಯೋಜನೆ ಮುಂದುವರಿಸಲು ನಿರ್ಧಾರ

ಬೆಂಗಳೂರು,ಮೇ 30

ರೈತರ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 30 ಜಿಲ್ಲೆಗಳ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಜೊತೆ ಬುಧವಾರ ಸಭೆ ನಡೆಸಿದ್ದು, ಯಶಸ್ವಿನಿ ಯೋಜನೆ ಮುಂದುರಿಸಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಬಿಜೆಪಿ ಶಾಸಕ ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿ ಅನೇಕ ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ.

‘ಚುನಾವಣೆ ಪೂರ್ವದಲ್ಲಿ ನೀಡಿದ ಮಾತಿನಂತೆ ನಡೆಯುತ್ತೇವೆ, ಹಿಂದೆ ಸರಿಯುವ ಮಾತಿಲ್ಲ. ಡಿಸಿಎಂ ಪರಮೇಶ್ವರ ಮತ್ತು ನಾನು ಇಬ್ಬರೂ ಈ ಕುರಿತು ಚರ್ಚಿಸಿದ್ದೇವೆ’ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

‘ನಗರ ಪ್ರದೇಶದ ಅಭಿವೃದ್ಧಿಯ ಹಣವನ್ನು ರೈತರ ಸಾಲ ಮನ್ನಾಗಾಗಿ ಬಳಕೆಯಾಗಲಿದೆ. ಅದರಿಂದ ಬೆಂಗಳೂರಿನ ನಾಗರಿಕರ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂಬುದು ಸರಿಯಲ್ಲ. ಖಜಾನೆಯೂ ಭದ್ರವಾಗಿರಲಿದೆ ಹಾಗೂ ರೈತರ ಸಾಲ ಮನ್ನಾ ಕೂಡ ಆಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು

ರೈತರ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 30 ಜಿಲ್ಲೆಗಳ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಜೊತೆ ಬುಧವಾರ ಸಭೆ ನಡೆಸುತ್ತಿದ್ದಾರೆ.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಬಿಜೆಪಿ ಶಾಸಕ ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿ ಅನೇಕ ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ.

‘ಚುನಾವಣೆ ಪೂರ್ವದಲ್ಲಿ ನೀಡಿದ ಮಾತಿನಂತೆ ನಡೆಯುತ್ತೇವೆ, ಹಿಂದೆ ಸರಿಯುವ ಮಾತಿಲ್ಲ. ಡಿಸಿಎಂ ಪರಮೇಶ್ವರ ಮತ್ತು ನಾನು ಇಬ್ಬರೂ ಈ ಕುರಿತು ಚರ್ಚಿಸಿದ್ದೇವೆ’ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

‘ನಗರ ಪ್ರದೇಶದ ಅಭಿವೃದ್ಧಿಯ ಹಣವನ್ನು ರೈತರ ಸಾಲ ಮನ್ನಾಗಾಗಿ ಬಳಕೆಯಾಗಲಿದೆ. ಅದರಿಂದ ಬೆಂಗಳೂರಿನ ನಾಗರಿಕರ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂಬುದು ಸರಿಯಲ್ಲ. ಖಜಾನೆಯೂ ಭದ್ರವಾಗಿರಲಿದೆ ಹಾಗೂ ರೈತರ ಸಾಲ ಮನ್ನಾ ಕೂಡ ಆಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ