ಜಕಾರ್ತ, ಮೇ 30-ಭಯೋತ್ಪಾದನೆ ವಿರುದ್ಧ ನಡೆಯುವ ಹೋರಾಟಕ್ಕೆ ಭಾರತ ಸದಾ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ಧಾರೆ. ಇಂಡೋನೆಷ್ಯಾ ಪ್ರವಾಸದಲ್ಲಿರುವ ಮೋದಿ ಇಂದು ಅಧ್ಯಕ್ಷ ಜೊಕೊ ವಿಡೊಡೊ ಅವರನ್ನು ಭೇಟಿಯಾದ ನಂತರ ನೀಡಿರುವ ಮಾಧ್ಯಮ ಹೇಳಿಕೆಯಲ್ಲಿ, ಇಂಡೋನೆಷ್ಯಾದ ಮೂರು ಚರ್ಚ್ಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗಳನ್ನು ಖಂಡಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವು ಜಕಾರ್ತಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಭಾರತ ಮತ್ತು ಆಸಿಯಾನ್ ದೇಶಗಳ ಸಹಭಾಗಿತ್ವದಿಂದ ಇಂಡೋ-ಪೆಸಿಫಿಕ್ ಪ್ರಾಂತ್ಯ ಮಾತ್ರವಲ್ಲೇ ಅದರ ಆಚೆಗೂ ಶಾಂತಿ ಸ್ಥಾಪನೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.