ನವದೆಹಲಿ:ಮೇ-31: ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಸಂತ್ರಸ್ತ ನಿಧಿಯಿಂದ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವೆ ಮನೇಕಾ ಗಾಂಧಿ ಎಲ್ಲಾ ರಾಜ್ಯಗಳೂ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಮನೇಕಾ ಗಾಂಧಿ, ಸಂತ್ರಸ್ತರಿಗೆ ಸರಿಯಾದ ಸಮಯದಲ್ಲಿ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಸಂತ್ರಸ್ತರ ಪರಿಹಾರ ನಿಧಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಪರಿಹಾರ ನೀಡುವಂತೆ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದಾರೆ.
ಪೊಕ್ಸೋ ಕಾಯಿದೆಯಡಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದರ ಜೊತೆಗೂ ಗಂಡು ಮಕ್ಕಳಿಗೂ ಭದ್ರತೆ ನೀಡಬೇಕೆಂದು ಹೇಳಿದ್ದಾರೆ. ದೇಶದ 31 ರಾಜ್ಯಗಳು ಸಂತ್ರಸ್ತರ ಪರಿಹಾರ ನಿಧಿ ನಿಯಮ 7ರ ಅಡಿಯಲ್ಲಿ ಪರಿಹಾರ ಯೋಜನೆ ಅಳವಡಿಸಿಕೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ,
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ರಾಜ್ಯಗಳು ಮಧ್ಯಂತರ ಪರಿಹಾರ ನೀಡುವುದರ ಜೊತೆಗೆ ಅವರ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ಅವಶ್ಯಕತೆಗಳನ್ನು ಪೂರೈಸಬೇಕೆಂದು ತಿಳಿಸಿದ್ದಾರೆ.